Share this news

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ  ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. 

ಕಾಂಗ್ರೆಸ್​ನಿಂದ 223 ಅಭ್ಯರ್ಥಿಗಳು, ಬಿಜೆಪಿಯಿಂದ 224, ಎಎಪಿಯಿಂದ 212, ಜೆಡಿಎಸ್​ನಿಂದ 211, ಬಿಎಸ್ಸಿಯಿಂದ 137, ಸಿಪಿಐಎಂಯಿಂದ 4, ಎನ್​ಪಿಪಿಯಿಂದ 4, ನೋಂದಾಯಿತ ಮತ್ತು ಮಾನ್ಯತೆರಹಿತ 736 , ಸ್ವತಂತ್ರ ಅಥವಾ ಪಕ್ಷೇತರ 1379, ಒಟ್ಟು 3130 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. 

ಇನ್ನು ಈ ಬಾರಿಯ ವಿಧಾನಸಭಾ ಚುನಾವಣೆ ಸಾಕಷ್ಟು ಪೈಪೋಟಿಯಿಂದ ಕೂಡಿದ್ದು ಪ್ರಮುಖ ಮೂರು ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಬಂಡಾಯವೆದ್ದ ಆಕಾಂಕ್ಷಿಗಳಲ್ಲಿ ಕೆಲವರು ಪಕ್ಷೇತರವಾಗಿ ನಾಮಿನೇಷನ್​​ ಫೈಲ್​ ಮಾಡಿದ್ದು ಪ್ರಬಲ ಮೂರು ಪಕ್ಷಗಳಿಗೆ ಹೊಡೆತ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ನಾಮಪತ್ರ ವಾಪಸ್​ ಪಡೆಯಲು ಮೂರು ಪಕ್ಷಗಳು ಮನವಿ ಮಾಡಿಕೊಳ್ಳುತ್ತಿವೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ್ದರಿಂದ, ಅಖಾಡಕ್ಕಿಳಿದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದರ ಸಂಜೆ ವೇಳೆಗೆ ಕಣದಲ್ಲಿ ಉಳಿಯುವ ಅಭ್ಯರ್ಥಿಗಳು ಎಷ್ಟು ಎಂದು ಪಕ್ಕಾ ಮಾಹಿತಿ ದೊರೆಯುತ್ತದೆ.

Leave a Reply

Your email address will not be published. Required fields are marked *