Share this news

ರಾಮನಗರ :ವಿಪರೀತ ಸಾಲಬಾಧೆಯಿಂದ ಬಳಲುತ್ತಿದ್ದ ಕುಟುಂಬವೊಂದು ಬೇಸತ್ತು ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ರಾಮನಗರದ ದೊಡ್ಡಮಣ್ಣು ಗುಡ್ಡೆಯ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬರು ಮೃತಪಟ್ಟಿದ್ದು, 6 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ರಾಜು ಎಂಬುವರ ಪತ್ನಿ ಮಂಗಳಮ್ಮ (28) ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಊಟದಲ್ಲಿ ವಿಷ ಬೆರೆಸಿಕೊಂಡು ಕುಟುಂಬದ ಸದಸ್ಯರೆಲ್ಲರೂ ಸೇವಿಸಿದ್ದಾರೆ. ಮಂಗಳಮ್ಮ ಮೃತಪಟ್ಟರೆ, ಪತಿ ರಾಜು (31), ಮಕ್ಕಳಾದ ಆಕಾಶ್ (9), ಕೃಷ್ಣ (13), ತಂಗಿ ಸವಿತಾ (24), ಸವಿತಾ ಮಗಳು (4), ಸೋಮ್ಮಪುರದಮ್ಮ (48) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ‌ ಘಟನೆಯಿಂದ ರಾಮನಗರ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *