ಬೆಂಗಳೂರು: ತೀವ್ರ ವಿರೋಧದ ಮಧ್ಯೆ ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ವಸೂಲಿ ಆರಂಭವಾಗಿದೆ. ಹೀಗಾಗಿ ಟೋಲ್ ಸಂಗ್ರಹಣೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ನವನಿರ್ಮಾಣ ವೇದಿಕೆ, ಜನ ಸೈನ್ಯ ವೇದಿಕೆ, ಕನ್ನಡಿಗರ ರಕ್ಷಣಾ ವೇದಿಕೆ, ಕರುನಾಡ ಸೇನೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿವೆ.
ಟೋಲ್ ಸಂಗ್ರಹಣೆಗೆ ಸ್ಥಳೀಯರು ಹಾಗೂ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದವು. ತೀವ್ರ ವಿರೋಧದ ನಡುವೆಯೂ ರಾಷ್ಟ್ರೀಯ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ.