ಬೆಂಗಳೂರು : ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡ ರೀತಿ ಘಟನೆ ಆಗುತ್ತದೆ ಎಂಬ ಕಾಂಗ್ರೆಸ್ ಎಂಎಲ್ಸಿ ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಇದೀಗ ಸರ್ಕಾರವೇ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಅವರ ಈ ಹೇಳಿಕೆ ಕುರಿತು ಸಿಸಿಬಿ ಪೊಲೀಸರು ಬಿ.ಕೆ ಹರಿಪ್ರಸಾದ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಕೆಕೆ ಗೆಸ್ಟ್ ಹೌಸ್ ನಲ್ಲಿ ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಹೇಳಿಕೆಯನ್ನು ಆಧರಿಸಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರಿಗೆ ವಿವಿಐಪಿ ಟ್ರೌಟ್ ಮೆಂಟ್ ಬೇಡ ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಎಂಎಲ್ಸಿ ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಸರ್ಕಾರದ ನಡಿಗೆ ಎಂ ಎಲ್ ಸಿ ಬಿ ಕೆ ಹರಿಪ್ರಸಾದ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಇದು ಕಾಂಗ್ರೆಸ್ ಸರ್ಕಾರವೋ ಅಥವಾ ಆರೆಸ್ಸೆಸ್ ಸರ್ಕಾರವೋ ಎಂದು ಆಕ್ರೋಶ ಹೊರಹಾಕಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ.ನನ್ನ ಜೊತೆಗೆ ವಿಜಯೇಂದ್ರರನ್ನು ಒಬ್ಬರು ಪರೀಕ್ಷೆಗೆ ಒಳಪಡಿಸಲಿ ನನ್ನ ಪರಿಸ್ಥಿತಿಯ ಹೀಗಾದರೆ ಇನ್ನು ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಸಂಸದ ಅನಂತ್ ಕುಮಾರ್ ಹೆಗಡೆಯವರು ಯಾವುದೇ ಕ್ರಮ ಆಗಿಲ್ಲ ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗುವುದಿಲ್ಲ ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ರಾಮಮಂದಿರಕ್ಕೆ ಹೋಗುವವರೆಗೆ ಸೂಕ್ತ ರಕ್ಷಣೆ ನೀಡಬೇಕು ಎಂದಿದ್ದಾರೆ.
ಜನವರಿ 22ರಂದು ಅಯೋಧ್ಯೆಗೆ ತೆರಳುವ ಯಾತ್ರಿಗಳಿಗೆ ರಕ್ಷಣೆ ನೀಡಬೇಕು. ಗೋಧ್ರಾ ರೀತಿ ದುರಂತ ಸಂಭವಿಸುವ ಮಾಹಿತಿ ಇದೆ ಎಂಬ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು ಇದೀಗ ಸಿಸಿಬಿ ಪೊಲೀಸರು ಎಂಎಲ್‌ಸಿಬಿ ಕೆ ಹರಿಪ್ರಸಾದ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ