ಹಾವೇರಿ : ರಾಜ್ಯದಲ್ಲಿ ಕಾಂಗ್ರೆಸ್‌ನ ಮೊದಲ ಗ್ಯಾರಂಟಿಯಾಗಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್ ಫುಲ್‌ರಶ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಿದದು ಸಾವನ್ನಪ್ಪಿದ ದುರ್ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದೆ. ಮಧು ಕುಂಬಾರ (14 ವರ್ಷ) ಮೃತ ಶಾಲಾ ಬಾಲಕಿಯಾಗಿದ್ದಾಳೆ. ಬಸ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಬಸ್‌ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ವಿದ್ಯಾರ್ಥಿನಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ ಆಯತಪ್ಪಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸ್ ಕೂಡ ಸ್ವಲ್ಪ ವೇಗವಾಗಿದ್ದರಿಂದ ಗಂಭೀರವಾಗಿ ಗಾಯಗೊಂಡ ಸಾವನ್ನಪ್ಪಿದ್ದಾಳೆ .