ಬೆಂಗಳೂರು:ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ರಿಲೀಫ್ ನೀಡಿದ್ದು,ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಠ್ಯ ಪುಸ್ತಕ ಪರಿಷ್ಕರಣೆ ಕೈಬಿಟ್ಟಿರುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.
ಅವರು ಈ ಕುರಿತು ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವದಲ್ಲಿ ಮಾತನಾಡಿ, ಪಠ್ಯದ ವಿಷಯದಲ್ಲಿ ಕೆಲವೊಂದು ಪರಿಷ್ಕರಣೆ ಅವಶ್ಯಕತೆ ಇದೆ. ಆದರೆ ಹಾಲಿ ಶೈಕ್ಷಣಿಕ ವರ್ಷಕ್ಕೆ ಈಗಾಗಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಪೂರೈಸಿರುವುದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುವ ಹಿನ್ನಲೆಯಲ್ಲಿ ಸಧ್ಯಕ್ಕೆ ಪರಿಷ್ಕರಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ಪಠ್ಯ ಪರಿಷ್ಕರಣೆ ಸಾಧಕ-ಬಾಧಕ ಬಗ್ಗೆಚರ್ಚೆ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಮಸ್ಯೆ, ಗೊಂದಲ ಆಗದಂತೆ ಶಾಲಾ ಮಕ್ಕಳಿಗೆ ಆರಂಭದಲ್ಲಿ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು