ಬೆಂಗಳೂರು : ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನದ ಭೀತಿ ಎದುರಾಗಿದೆ.
ಹೈಕೋರ್ಟ್ ಏಕಸದಸ್ಯ ಪೀಠ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿವಜಾ ಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 2ರಂದು ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಚೀಫ್ ಅಕೌಂಟಿಂಗ್ ಆಫೀಸರ್ ಮಾಡಾಳ್ ಪ್ರಶಾಂತ್ ಅವರು 40 ಲಕ್ಷ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಕೋಟಿ ಕೋಟಿ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಮಾಡಾಳ್ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಪುತ್ರ ಪ್ರಶಾಂತ್ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ನೀಡಿದ್ದರು.