Share this news

ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇದರ ಹೊರತಾಗಿ ಇನ್ನೂ 20 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಕುರಿತಂತೆ ಹೈಕೋರ್ಟ್ ಗರಂ ಆಗಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ನೇಮಕಾತಿ, ಶಾಲೆಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

20 ಸಾವಿರ ಶಿಕ್ಷಕರ ನೇಮಕಾತಿಗೆ ಬೇಡಿಕೆ ಸಲ್ಲಿಸುತ್ತಿದ್ದು, ಮುಖ್ಯಮಂತ್ರಿಗಳು ಒಪ್ಪಿಗೆ ನೀಡುವ ವಿಶ್ವಾಸವಿದೆ. ಶಿಕ್ಷಕರನ್ನು ನೇಮಕಾತಿ ಮಾಡಿ ಕೊರತೆ ನೀಗಿಸಲಾಗುವುದು. ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆ ಹೆಚ್ಚಳ ಮಾಡಲಾಗುವುದು. ಮುಂದಿನ ಆರ್ಥಿಕ ವರ್ಷದಲ್ಲಿ 500 ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಉದ್ದೇಶವಿದೆ ಎಂದರು.

13 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ವ್ಯಾಜ್ಯದ ವಿಚಾರಣೆ ಅಂತಿಮ ಹಂತಕ್ಕೆ ಬಂದಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು. ಹೊಸದಾಗಿ 20 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸಿಎಸ್‌ಆರ್ ನಿಧಿ ಬಳಸಿಕೊಂಡು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು

 

 

 

 

 

 

 

 

 

Leave a Reply

Your email address will not be published. Required fields are marked *