ಹೆಬ್ರಿ: ಶಿವಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ ಜಾಗೃತಿ ಸಭೆಯ ಮಾ.26ರಂದು ಜರುಗಿತು.
ಶಂಖನಾದ, ದೀಪ ಪ್ರಜ್ವಲನೆ ಹಾಗೂ ವೇದಮಂತ್ರ ಘೋಷದೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಭೆಯಲ್ಲಿ ಸೂರಿಮಣ್ಣು ಮಠ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸದಾಶಿವ ಉಪಾಧ್ಯಾಯ, ಹಿಂದೂ ಜನಜಾಗೃತಿ ಸಮಿತಿಯ ಉಡುಪಿ ಜಿಲ್ಲಾ ಸಮನ್ವಯಕರಾದ ವಿಜಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸಾಮಾನ್ಯ ಹಿಂದೂಗಳು, ವಿವಿಧ ಹಿಂದೂ ಸಂಘಟನೆಗಳು ಮತ್ತು ವಿವಿಧ ಪಂಗಡಗಳನ್ನು ಒಗ್ಗೂಡಿಸುವ ಜತೆಗೆ ಹಿಂದೂಗಳು ಮತ್ತು ಹಿಂದೂ ಧರ್ಮದ ಮೇಲೆ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಮಾಜಿಕ ಹಲ್ಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದು ವಿಜಯ ಕುಮಾರ್ ಹೇಳಿದ್ದಾರೆ