Share this news

ಶಿವಮೊಗ್ಗ: ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಘಿದೆ. ಕಿಡಿಗೇಡಿಗಳು ಸಿಕ್ಕ ಸಿಕ್ಕ ಕಡೆ ಕಲ್ಲು ತೂರಿದ್ದು ಕಾರು, ಬೈಕ್, ಆಟೋಗಳು ಜಖಂಗೊAಡಿವೆ. ಗಲಾಟೆ ವೇಳೆ 7ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಆಸ್ಪತ್ರೆ ಸೇರಿದ್ದಾರೆ. ಇದರಿಂದ ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಘಟನೆಯನ್ನು ಕರ್ನಾಟಕ ಬಿಜೆಪಿ ಖಂಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬAಧಿಸಿದAತೆ ಟ್ವೀಟ್ ಮಾಡಿರುವ ಬಿಜೆಪಿ, ಹಿಂದೂಗಳು ಇರುವ ಹಾಗಿಲ್ಲವಾ? ಹಿಂದೂಗಳಿಗೆ ರಕ್ಷಣೆ ಕೊಡುವುದಿಲ್ಲವೇ? ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು “ಜಾತ್ಯಾತೀತ: ಸಿದ್ದರಾಮಯ್ಯರಿಗಿದೆಯೇ? ಎಂದು ಪ್ರಶ್ನಿಸಿದೆ.

ತಲ್ವಾರ್ ಮೆರವಣಿಗೆ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತದೆ. ಇದಕ್ಕೆ ಅನುಮತಿ ನೀಡಿದ ಕಾಂಗ್ರೆಸ್ ಸರ್ಕಾರವೇ ತಿಳಿಸಬೇಕು . ಹಿಂದೂಗಳನ್ನು ಮುಗಿಸುತ್ತೇವೆ ಎಂದು ಹೇಳಿದ ಜಿಹಾದಿ ಸಂಘಟನೆಗಳಿಗೆ ಬೆಂಬಲವಾಗಿ ಕಾಂಗ್ರೆಸ್ ಸರ್ಕಾರ ನಿಂತಿರುವುದಕ್ಕೆ ಬೇರೇನು ಸಾಕ್ಷಿ ಬೇಕು. ಗಣೇಶ ಚತುರ್ಥಿಗೆ ಹಿಂದೂಗಳು ಸ್ಥಾಪಿಸುವ ಗಣಪತಿಗೆ ನೂರೆಂಟು ಅನುಮತಿ ಕೇಳುವ ಕೈ ಸರ್ಕಾರ, ಸಮಾಜದ ಶಾಂತಿ ಕದಡುವ ಇಂತಹ ಮೆರವಣಿಗೆಗಳಿಗೆ ಅನುಮತಿ ನೀಡಿದ್ದರ ಹಿನ್ನಲೆ ಏನು? ಈ ಜಿಹಾದಿ ಸರ್ಕಾರದಿಂದ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

 

 

 

 

Leave a Reply

Your email address will not be published. Required fields are marked *