Share this news

ಶಿವಮೊಗ್ಗ: ತುಂಗಾ ನದಿ ತೀರದಲ್ಲಿ ಶಂಕಿತ ಉಗ್ರ ಶಾರೀಕ್ ಸೇರಿದಂತೆ ಇತರರು ನಡೆಸಿರುವ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ಹಿಂದೆ ಐಸಿಸ್ ಒಳಸಂಚು ಅಡಗಿರುವ ವಿಚಾರದಲ್ಲಿ ಎನ್ಐಎ ಅಧಿಕಾರಿಗಳ ತಂಡ ಪತ್ತೆ ಹಚ್ಚಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಇಂದು ರಾಜ್ಯದ 6 ಕಡೆಯಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ದಾಳಿ ಕೂಡ ನಡೆಸಿದೆ.

ಶಿವಮೊಗ್ಗದ ಮಂಜುನಾಥ ಬಡವಾಣೆಯಲ್ಲಿ ಉಜೇರ್ ಫರ್ಹಾನ್ ಬೇಗ್ ಹಾಗೂ ಉಡುಪಿಯ ರೇಶಾನ್ ತಾಜುದ್ದೀನ್ ಶೇಕ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತ ಈ ಇಬ್ಬರು ಐಸಿಸ್ ಜೊತೆಗೆ ಸಂಪರ್ಕ ಹೊಂದಿದ್ದಂತ ಶಂಕಿತರು ಎನ್ನಲಾಗುತ್ತಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯ ಶಂಕಿತನ ಮನೆಯ ಮೇಲೆ ದಾಳಿ ನಡೆಸಿರುವಂತ ಎನ್ಐಎ ಅಧಿಕಾರಿಗಳ ತಂಡವು, ಮನೆಯಲ್ಲಿ ಪೆನ್ ಡ್ರೈವ್ ಸೇರಿದಂತೆ ಹಲವು ಮಹತ್ವದ ಮಾಹಿತಿಯನ್ನು ಪತ್ತೆ ಹಚ್ಚಿ ವಶ ಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ನಡೆದಿರುವ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಟ್ರಯಲ್ ಬ್ಲಾಸ್ಟ್ ಸಂಬಂಧ ಎನ್ಐಎ ಇಂದು ಬೆಂಗಳೂರು, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಕಡೆಯಲ್ಲಿ ದಾಳಿ ನಡೆಸಿದ್ದಾರೆ.

ಇನ್ನು ಶಿವಮೊಗ್ಗದ ತುಂಗಾ ತೀರದ ಬಾಂಬ್ ಬ್ಲಾಸ್ಟ್ ಕೇಸ್ ನಲ್ಲಿ ಐಸಿಸ್ ಒಳಸಂಚು ಇರುವ ಬಗ್ಗೆಯೂ ಎನ್ಐಎ ಅಧಿಕಾರಿಗಳ ತಂಡ ಪತ್ತೆ ಹಚ್ಚಿದೆ ಎನ್ನಲಾಗುತ್ತಿದೆ. ಹೀಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆ ಮಾಡುತ್ತಿದ್ದಾರೆ ತಿಳಿದು ಬಂದಿದೆ.

 

Leave a Reply

Your email address will not be published. Required fields are marked *