ನವದೆಹಲಿ :ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರು ಮುಂದಿನ ದಿನಗಳಲ್ಲಿ ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿದೆ ಎಂದು ಹೇಳಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ಭವಿಷ್ಯದ ಯೋಜನೆಗಳನ್ನು ಸಂದರ್ಶನವೊAದರಲ್ಲಿ ಹಂಚಿಕೊAಡಿದ್ದಾರೆ. ನ್ಯೂಯಾರ್ಕ್ ಪ್ಯಾಲೇಸ್ ಹೋಟೆಲ್ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಳಿಕ ಈ ಸಂದರ್ಶನ ನಡೆದಿದೆ. ಈ ವರ್ಷದ ಅಂತ್ಯದೊಳಗೆ ಜಾಗವನ್ನು ಫೈನಲ್ ಮಾಡುವುದಾಗಿ ತಿಳಿಸಿದ್ದಾರೆ.

ಜ್ಯಾಕ್ ಡಾರ್ಸೆ ವಿವಾದ ಹಾಗೂ ಭಾರತದಲ್ಲಿ ಟ್ವಿಟ್ಟರ್ ಕಚೇರಿಗಳನ್ನು ಮುಚ್ಚುವ ಬಗ್ಗೆ ಕೇಳಿದಾಗ ಸಾಮಾಜಿಕ ಮಾಧ್ಯಮ ವೇದಿಕೆಗಳು ಸ್ಥಳೀಯ ಸರ್ಕಾರದ ನಿಯಮಗಳನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ಮಸ್ಕ್ ಹೇಳಿದ್ದಾರೆ. ನಾವು ಸ್ಥಳೀಯ ಕಾನೂನುಗಳನ್ನು ಪಾಲಿಸದಿದ್ದರೆ ಮುಚ್ಚಲ್ಪಡುತ್ತೇವೆ, ಭಾರತದಲ್ಲಿ ಟೆಸ್ಲಾ ಹೂಡಿಕೆ ಯೋಜನೆಗಳ ಬಗ್ಗೆ ಮುಂಬರುವ ವರ್ಷ ಭಾರತಕ್ಕೆ ಭೇಟಿ ನೀಡಲು ಬಯಸುವುದಾಗಿ ತಿಳಿಸಿದರು.

ಪ್ರಧಾನಿ ಮೋದಿ ಭಾರತದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಅವಕಾಶವನ್ನು ನೀಡಿದ್ದಾರೆ. ಹೊಸ ಕಂಪನಿಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲು ಕಾತುರನಾಗಿದ್ದೇನೆ ಎಂದು ಎಲಾನ್ ಮಸ್ಕ್ ತಿಳಿಸಿದ್ದಾರೆ.

