ಬೆಂಗಳೂರು: ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರು ಆಯ್ಕೆಯಾಗಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಅವರು ಇಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಚುನಾವಣಾ ದೃಷ್ಟಿಯಿಂದ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರಲಿಲ್ಲ. ಅವರನ್ನೇ ಮುಂದುವರೆಸಿತ್ತು. ಈಗ ಹೊಸಬರ ಆಯ್ಕೆ ನಡೆಯಲಿದೆ ಎಂದರು. ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆ ಕೆಲವೊಮ್ಮೆ ನಡೆಯುತ್ತದೆ. ನಾವು ಸೋಲನ್ನ ಸವಾಲಾಗಿ ತೆಗೆದುಕೊಂಡಿದ್ದೇವೆ ಎಂದರು.
ರಾಜ್ಯಾಧ್ಯಕ್ಷರ ಹುದ್ದೆಗೆ ಬಿವೈ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಅಶ್ವಥ್ ನಾರಾಯಣ್, ಸುನೀಲ್ ಕುಮಾರ್ ಸೇರಿದಂತೆ ಹಲವರ ಹೆಸರು ಚರ್ಚೆಯಾಗುತ್ತಿದೆ. ಅಂತಿಮವಾಗಿ ರಾಜ್ಯಾಧ್ಯಕ್ಷರ ಪಟ್ಟ ಯಾರಿಗೆ ಸಿಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.