ದಾವಣಗೆರೆ:ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಕೃಷಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಹೇಳಿದ್ದಾರೆ.ಅವರು ಭಾನುವಾರ ದಾವಣಗೆರೆಯಲ್ಲಿ ಸುದ್ಧಿಗಾರರ ಜತೆ ಮಾತನಾಡಿ,ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಈಗಾಗಲೇ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಈಗ ಏಕಕಾಲದಲ್ಲೇ ಜಾರಿಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದೇವೆ. ಜಾರಿಯೂ ಮಾಡಿದ್ದೇವೆ ಎಂದರು.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದವು. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆ ಪಿಂಚಣಿ(OPS) ಜಾರಿಗೊಳಿಸುವುದಾಗಿದೆ. ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ NPS ರದ್ದುಗೊಳಿಸಿ, OPS ಜಾರಿಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಶೀಘ್ರವೇ ಸಿಎಂ ಸಿದ್ಧರಾಮಯ್ಯ ಈ ಬಗ್ಗೆಯೂ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿತ್ತು. ಇದನ್ನು ಜಾರಿ ಮಾಡುವುದಾಗಿಯೂ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲೂ ಘೋಷಿಸಿತ್ತು. ಈ ಬೆನ್ನಲ್ಲೇ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. OPS ಜಾರಿಗೊಳಿಸುವುದಾಗಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹೊಸ ಪಿಂಚಣಿ ಯೋಜನೆಯನ್ನು (NPS)ವಿರೋಧಿಸಿ ರಾಜ್ಯದ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದರು. ಆದರೆ 2004ರ ಬಳಿಕ ಸರ್ಕಾರಿ ಸೇವೆಗೆ ಸೇರಿದವರು ಹೊಸ ಪಿಂಚಣಿ ಯೋಜನೆಯನ್ನು ಒಪ್ಪಿಕೊಂಡೇ ಉದ್ಯೋಗಕ್ಕೆ ಸೇರಿದ್ದಾರೆ ಎನ್ನುವ ಮಾಹಿತಿಯಿದ್ದು, ಇದೀಗ ಹಾಲಿ ಸರ್ಕಾರ ಈ ತಾಂತ್ರಿಕ ತೊಡಕನ್ನು ನಿವಾರಿಸಿ ಎಲ್ಲಾ ನೌಕರರಿಗೂ ಏಕರೂಪದ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುತ್ತದೆಯೇ ಎನ್ನುವುದು ಸಧ್ಯದ ಪ್ರಶ್ನೆಯಾಗಿದೆ