Share this news

ಪೂಂಚ್(ಏ.20):  ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಭಾರತೀಯ ಸೇನಾ ವಾಹನ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ವಲಯದಲ್ಲಿ ಯೋಧರನ್ನು ಹೊತ್ತು ಸಾಗುತ್ತಿದ್ದ ಸೇನಾ ವಾಹನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದರ ಪರಿಣಾಮ ವಾಹನದಲ್ಲಿದ್ದ ನಾಲ್ವರು ಯೋಧರು ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಸೇನಾ ಪಡೆ ಧಾವಿಸಿದ್ದು ಬೆಂಕಿ ನಂದಿಸಿದೆ. ಪ್ರಕರಣ ದಾಖಲಿಸಿಕೊಂಡು ಇದೀಗ ತನಿಖೆ ನಡೆಸಲಾಗುತ್ತಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಸಿಡಿಲಿನ ಹೊಡೆತಕ್ಕೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸೇನಾ ವಾಹನ ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಹನ ಸಂಪೂರ್ಣ ಹೊತ್ತಿ ಉರಿಯುತ್ತಿರುವ ದೃಶ್ಯ ಹಾಗೂ ಜನರು ಆಗಮಿಸುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಇತ್ತೀಚೆಗೆ ಸೇನಾ ವಾಹನ ಅಪಘಾತಕ್ಕೀಡಾಗುವ ಸಂಖ್ಯೆ ಹೆಚ್ಚಾಗುತ್ತಿದೆ.  2022ರ ಡಿಸೆಂಬರ್ ತಿಂಗಳಲ್ಲಿ ಸೇನಾ ವಾಹನ ಕಂದಕ್ಕೆ ಉರುಳಿ ಬಿದ್ದು 16 ಯೋಧರು ಮೃತಪಟ್ಟಿದ್ದರು. ಈ ದುರ್ಘಟನೆಯಲ್ಲಿ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.  ಚತ್ತನ್‌ನಿಂದ ಥಂಗೂ ಕಡೆಗೆ ಹೊರಟಿದ್ದ ಸೇನಾ ವಾಹನಗಳಲ್ಲಿದ್ದ ಟ್ರಕ್‌ ತಿರುವಿನಲ್ಲಿ ಆಯ ತಪ್ಪಿ ಕಂದಕಕ್ಕೆ ಉರುಳಿದೆ. ಘಟನೆ ನಡೆದ ಕೂಡಲೇ ರಕ್ಷಣಾ ಕಾರಾರ‍ಯಚಾರಣೆಯನ್ನು ಆರಂಭಿಸಲಾಗಿದ್ದು, ಗಾಯಗೊಂಡ ಸ್ಥಿತಿಯಲ್ಲಿದ್ದ ನಾಲ್ವರು ಯೋಧರನ್ನು ಏರ್‌ಲಿಫ್‌್ಟಮಾಡಲಾಗಿದೆ. ಆದರೆ ದುರಂತದಲ್ಲಿ ಮೂವರು ಜೂನಿಯರ್‌ ಕಮಿಷನ್‌್ಡ ಅಧಿಕಾರಿಗಳು ಮತ್ತು 13 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಸೇನೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *