Share this news

ನವದೆಹಲಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಎ.ಮಂಜು, ದೇವರಾಜೇಗೌಡ ಅವರು ಹೈಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು . ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.

ಇದರಿಂದ ಸಂಕಷ್ಟ ಸಿಲುಕಿದ್ದ ಪ್ರಜ್ವಲ್ ರೇವಲ್ ರೇವಣ್ಣ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಂದು(ಸೆಪ್ಟೆಂಬರ್ 18) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಪೀಠ, ಕರ್ನಾಟಕ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ್, ಪರಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ, ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದೆ. ಆದರೆ, ಕೆಲವು ಷರತ್ತುಗಳನ್ನು ವಿಧಿಸಿದೆ. ಲೋಕಸಭೆಯಲ್ಲಿ ಅಧಿವೇಶನದಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವುದೇ ವೋಟಿಂಗ್ ಪವರ್ ಇರುವುದಿಲ್ಲ. ಸರ್ಕಾರದಿಂದ ಬರುವ ಭತ್ಯೆಗಳನ್ನ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

 

 

 

Leave a Reply

Your email address will not be published. Required fields are marked *