Share this news

ಉಡುಪಿ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಯುವ ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲವಾಗಿರಿಸುತ್ತವೆ. ಆಟ ಮತ್ತು ಪಾಠದೊಂದಿಗೆ ಊಟದ (ಆಹಾರ) ಕಡೆಗೂ ನಾವು ಗಮನ ಹರಿಸುವುದು ಅತ್ಯಗತ್ಯ. ಹಿರಿಯರಿಂದ ಬಳುವಳಿಯಾಗಿ ಬಂದಿರುವ ಆಹಾರ ಪದ್ಧತಿ, ಆಚಾರ, ವಿಚಾರ, ಸಂಸೃತಿಗಳನ್ನು ನಮ್ಮೊಳಗೆ ಅಳವಡಿಸಿಕೊಳ್ಳುವ ಮೂಲಕ ದೇಶದ ಸತ್ಪ್ರಜೆಗಳಾಗಳಾಗೋಣ ಎಂದು ಅದಮಾರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅವರು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಬಹುಮಾನ ವಿತರಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿದ್ದ ಇನ್ನಂಜೆಯ ಎಸ್,ವಿ.ಹೆಚ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪುಂಡರೀಕಾಕ್ಷ ಕೊಡಂಚ ಮಾತನಾಡಿ, ಗಳಿಕೆಯೊಂದಿಗಿನ ಕಲಿಕೆಗೆ ಅವಕಾಶ ನೀಡಿ, ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಸಾಧನೆಗಳ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು

ಪ್ರಾಂಶುಪಾಲದರಾದ ಡಾ.ಸುಕನ್ಯಾ ಮೇರಿ.ಜೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಸಿ.ಎ. ಟಿ. ಪ್ರಶಾಂತ್ ಹೊಳ್ಳ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಚಂದ್ರಕಾAತ್ ಭಟ್, ಲವಿಟಾ ಡಿಸೋಜಾ, ಉಪ ಪ್ರಾಂಶುಪಾಲರಾದ ವಿನಾಯಕ್ ಪೈ, ವಿದ್ಯಾರ್ಥಿ ಪ್ರತಿನಿಧಿಗಳಾದ ರಮೇಶ್ ಕಾಮತ್, ಕುಮಾರೇಶ್, ಕು. ಸಿಂಧೂ, ಕು. ನಮ್ರತಾ ಕುಂದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಹನಾ ಸ್ವಾಗತಿಸಿ, ಕು.ನಮ್ರತಾ ವಂದಿಸಿದರು.  ಸೌಜನ್ಯಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *