Share this news

ಬೆಂಗಳೂರು: ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಇದೀಗ ಮತ್ತೊಂದು ಶಾಕ್‌ ಎದುರಾಗಿತ್ತು. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದ್ದರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ. ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದರು. ಸದ್ಯಕ್ಕೆ ದರ ಏರಿಕೆ ಬಗ್ಗೆ ಯಾವುದೇ ಯೋಚನೆಯೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *