ಮೈಸೂರು: ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ ಅದನ್ನು ಬೇರು ಸಹಿತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ, ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀಗಳು ಈ ಕುರಿತು ಮಾತನಾಡಿ, ಒಂದು ರಾಜ್ಯದ ಮುಖ್ಯಮಂತ್ರಿ ಆಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಅವರು ಸಮಾಜದಲ್ಲಿ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸನಾತನ ಎಂದರೆ ಸದಾ ಕಾಲವೂ ಇರುವಂತದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರ ಧರ್ಮ. ನಮ್ಮ ಸುಖದಿಂದ ನಮ್ಮ ಸುತ್ತಮುತ್ತಲಿನವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ನಮ್ಮ ಸುತ್ತಮುತ್ತ ಇರುವವರಿಗೂ ಸಂತೋಷ ಸಿಗಬೇಕು ಎನ್ನುತ್ತದೆ ಸನಾತನ ಧರ್ಮ. ಆದ್ದರಿಂದ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವುದು ಸರಿಯಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.