Share this news

ಚೆನ್ನೈ: ಸನಾತನ ಧರ್ಮದ ವಿರುದ್ಧ ಹೋರಾಡುವುದಕ್ಕೆಂದೇ ಪ್ರತಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ (I.N.D.I.A) ಅಸ್ತಿತ್ವಕ್ಕೆ ಬಂದಿದೆ ಎಂದು ತಮಿಳುನಾಡಿನ ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಸನಾತನ ಧರ್ಮದ ವಿರುದ್ಧ ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಪೊನ್ಮುಡಿ ಅವರಿಂದ ಸನಾತನ ಧರ್ಮದ ವಿರುದ್ಧ ಈ ಹೇಳಿಕೆ ಬಂದಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು (BJP) ಎದುರಿಸುವುದಕ್ಕಾಗಿ ಇಂಡಿಯಾ ಮೈತ್ರಿಕೂಟ ಸ್ಥಾಪಿಸಲಾಗಿದೆ ಎಂದು ಪ್ರತಿಪಕ್ಷಗಳು ಹೇಳಿವೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೋದಲ್ಲಿ ಪೊನ್ಮುಡಿ ಅವರು, ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು ಭಾರತ ಮೈತ್ರಿಕೂಟ ರಚನೆಯಾಗಿದೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಮೈತ್ರಿಕೂಟದ 26 ಪಕ್ಷಗಳು ಸನಾತನ ಧರ್ಮದ ವಿರುದ್ಧದ ಹೋರಾಟದಲ್ಲಿ ಒಂದಾಗಿವೆ. ಆದರೆ ಅದಕ್ಕೆ ರಾಜಕೀಯ ಶಕ್ತಿ ಕೂಡ ಬೇಕಾಗಿದೆ ಎಂದು ಹೇಳಿರುವುದು ದಾಖಲಾಗಿದೆ.

Leave a Reply

Your email address will not be published. Required fields are marked *