Share this news

ಚೆನ್ನೈ: ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಡಿಎಂಕೆ ಸಂಸದ ಎ. ರಾಜಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಸನಾತನ ಧರ್ಮ ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕೆಂದು ಸಚಿವ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಡಿಎಂಕೆ ಸಂಸದ ಎ ರಾಜಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಹೇಳುವ ಮೂಲಕ ಉದಯನಿಧಿ ಹೇಳಿಕೆಗೆ ಬೆಂಬಲ ನೀಡಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎ.ರಾಜಾ, ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ, ಡಿಎಂಕೆ ಸಚಿವ ಮತ್ತು ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠ ರೋಗಗಳಿಗೆ ಹೋಲಿಸಿದ್ದಾರೆ.
ಸನಾತನ ಮತ್ತು ವಿಶ್ವಕರ್ಮ ಯೋಜನೆಗಳು ಬೇರೆ ಬೇರೆಯಲ್ಲ, ಅವು ಒಂದೇ. ಉದಯನಿಧಿ ಸ್ಟಾಲಿನ್ ಅವರು ಮಲೇರಿಯಾ ಮತ್ತು ಡೆಂಗ್ಯೂನಂತೆ ಇದನ್ನು ನಿರ್ಮೂಲನೆ ಮಾಡಬೇಕು ಎಂದು ನೀಡಿದ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ನೀವು ಯಾರನ್ನಾದರೂ ಕರೆದುಕೊಂಡು ಬನ್ನಿ, ಸನಾತನ ಧರ್ಮದ ಬಗ್ಗೆ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಎ ರಾಜಾ ಹೇಳಿದರು, ಅವರು ಯಾವುದೇ ರೀತಿಯ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಬರಲಿ ನಾನು ದೆಹಲಿಗೆ ಬಂದು ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *