ಚೆನ್ನೈ: “ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು” ಎಂದು ಡಿಎಂಕೆ ಸಚಿವ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಹಲವರು ಕರೆ ನೀಡಿದ್ದಾರೆ.
“ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್’ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನವು ಈ ನರಮೇಧದ ಕರೆಗೆ ಬೆಂಬಲವಾಗಿದೆ. ಭಾರತ ಒಕ್ಕೂಟವು ಅದರ ಹೆಸರಿಗೆ ನಿಜವಾದ ಅವಕಾಶವನ್ನು ನೀಡಿದರೆ, ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ. ಅದು I.N.D.I.A” ಎಂದು ಬಿಜೆಪಿಯ ಅಮಿತ್ ಮಾಳವಿಯಾ ಎಕ್ಸ್ನಲ್ಲಿ (ಈ ಹಿಂದಿನ ಟ್ವಿಟ್ಟರ್) ಪೋಸ್ಟ್ ಮಾಡಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, “ಕೆಲವನ್ನು ನಾವು ಕೇವಲ ವಿರೋಧ ಮಾಡಿದರೆ ಸಾಲದು. ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಸೊಳ್ಳೆಗಳು, ಡೆಂಘಿ ಜ್ವರ, ಮಲೇರಿಯಾ, ಕೊರೋನಾ ಇವುಗಳನ್ನು ವಿರೋಧಿಸಿದರೆ ಸಾಲದು. ನಿರ್ಮೂಲನೆ ಮಾಡಬೇಕು. ಸನಾತನ ಧರ್ಮವೂ ಸಹ ಇದೇ ರೀತಿ. ಈ ಸಮ್ಮೇಳನದಲ್ಲಿ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು. ಹಾಗೆಯೇ ಸನಾತನ ಧರ್ಮ ನಿರ್ಮೂಲನೆ ಎಂಬ ಸಮ್ಮೇಳನ ಆಯೋಜನೆ ಮಾಡಿದವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಸನಾತನ ಧರ್ಮವನ್ನು ವಿರೋಧಿಸುವುದಲ್ಲ. ನಿರ್ಮೂಲನೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಸನಾತನಂ ಎಂಬ ಪದ ಸಂಸ್ಕೃತದಿAದ ಬಂದಿದ್ದು, ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಸನಾತನ ಎಂಬುದು ಶಾಶ್ವತತೆಯಾಗಿದೆ. ಅದನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.