ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಜಟಾಪಟಿ ಇಂದು ನಿನ್ನೆಯದಲ್ಲ.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದ ಬಳಿಕ ಸಿಎಂ ಸ್ಥಾನಕ್ಕಾಗಿ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿತ್ತು,ಒಂದು ಹಂತದಲ್ಲಿ ಕಾಂಗ್ರೆಸ್ ಹೈಕಮಾಂಡಿಗೂ ಸಿದ್ದು- ಡಿಕೆಶಿ ನಡುವೆ ಹೊಂದಾಣಿಕೆ ಮೂಡಿಸುವುದು ಸವಾಲಿನ ವಿಷಯವಾಗಿತ್ತು. ಕೊನೆಗೂ ಅಳೆದುತೂಗಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಘೋಷಿಸಿ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು.
ಈ ಬೆಳವಣಿಗೆಯಿಂದ ಡಿಕೆ ಶಿವಕುಮಾರ್ ಅಕ್ಷರಶಃ ಕೆಂಡವಾಗಿದ್ದರು. ಈ ನಡುವೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರೇ ಖುದ್ದು ಮಾತುಕತೆ ನಡೆಸಿ ಮನವೊಲಿಸಲು ಯಶಸ್ವಿಯಾಗಿದ್ದರು.ಆದರೆ ಡಿಕೆಶಿ ಗೆ ಮನಸ್ಸಿನ ಮೂಲೆಯಲ್ಲಿ ಸಿಎಂ ಕುರ್ಚಿಯ ಎಂದಿಗೂ ಮರೆಯಾಗಿಲ್ಲ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಂದಿನ ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಆಗುವುದು ನಿಶ್ಚಿತ, ಅವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲವೂ ಇಲ್ಲ ಎಂದು ಶಾಸಕರು ಸ್ಪಷ್ಟಪಡಿಸಿದರು. ಹೈಕಮಾಂಡ್ ಮಟ್ಟದಲ್ಲಿ ಏನು ಆಗಿದೆಯೋ ನಮಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿ ಆಗಲೇಬೇಕು. ಕಾಲ ಬಂದಾಗ ಎಲ್ಲವೂ ನಿರ್ಣಯವಾಗಲಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಂತೂ ನಿಶ್ಚಿತ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಹಾಗೂ ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ ಅವರು ಹೇಳಿರುವುದು ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಅವರ ಹೇಳಿಕೆಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಕೂಡ ದನಿಗೂಡಿಸಿದ್ದು,ಡಿಕೆ ಶಿವಕುಮಾರ್ ಅವರು ಸಮರ್ಥ ಆಡಳಿತಗಾರ, ಸಿದ್ದರಾಮಯ್ಯ ಅವರ ಅವಧಿಯ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ,ಅದನ್ನು ತಡೆಯಲು ಯಾರಿಂದಲೂ ತಡೆಯಲು ಸಾಧ್ಯವಿಲ್ಲ,
ಆದರೆ ಯಾವಾಗ ಸಿಎಂ ಆಗಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದಾರೆ