Share this news

ಮಂಗಳೂರು :ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಅವಕಾಶ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಹಿಳಾ ಭಕ್ತರ ದಂಡು ಸಾಗರೋಪಾದಿಯಲ್ಲಿ ಹರಿದುಬಂದಿದೆ. ಉಚಿತ ಪ್ರಯಾಣ ಘೋಷಣೆ ಬಳಿಕದ ಮೊದಲ ವೀಕೆಂಡ್ ಹಿನ್ನಲೆ ಸರ್ಕಾರಿ ಬಸ್‌ಗಳು ತುಂಬಿ ತುಳುಕುತ್ತಿವೆ. ಧರ್ಮಸ್ಥಳಕ್ಕೆ ಹೋಗುವ ಎಲ್ಲ ಬಸ್‌ಗಳು ಮಹಿಳೆಯರು, ಯುವತಿಯರಿಂದಲೇ ತುಂಬಿವೆ.

ಉಚಿತ ಪ್ರಯಾಣ ಬಳಿಕ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರು ಹೊರಡುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದಿಂದ ಹೆಚ್ಚು ಮಹಿಳೆಯರು ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನಕ್ಕೆ ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ಹೀಗಾಗಿ ಈ ಮಾರ್ಗದ ಎಲ್ಲ ಬಸ್ ಗಳು ಪ್ರಯಾಣಿಕರಿಂದ ತುಂಬಿತುಳುಕುತ್ತಿವೆ.

ಬೆAಗಳೂರು, ಮೈಸೂರು, ಕೋಲಾರ, ತುಮಕೂರು ಭಾಗದಿಂದಲೂ ಭಕ್ತಾದಿಗಳು ಬರುತ್ತಿದ್ದು, ಇದೀಗ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಎಲ್ಲಿ ನೋಡಿದರೂ ಮಹಿಳಾ ಭಕ್ತರೇ ಕಾಣಿಸುತ್ತಿದ್ದಾರೆ.ಅಲ್ಲದೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ಗಳಲ್ಲೂ ಮಹಿಳಾ ಭಕ್ತರೇ ಕಾಣಿಸುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯ ಸರ್ಕಾರ ಶಕ್ತಿ ಯೋಜನೆಯಿಂದ ತೀರ್ಥಕ್ಷೇತ್ರಗಳು, ಪ್ರವಾಸಿತಾಣಗಳಿಗೂ ಹೊಸ ಚೈತನ್ಯ ಬಂದAತಾಗಿದೆ. ಉಚಿತ ಪ್ರಯಾಣದ ಪರಿಣಾಮ ಪ್ರವಾಸೋದ್ಯಮಕ್ಕೂ ಅನುಕೂಲವಾಗಿದೆ

Leave a Reply

Your email address will not be published. Required fields are marked *