ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ರಾತ್ರಿ 9:30 ಕ್ಕೆ ಸಂಘದ ಪದಾಧಿಕಾರಿಗಳ ಜೊತೆ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಸಂಘದ ಸಂಘದ ಪದಾಧಿಕಾರಿಗಳ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ. ಇಂದು ರಾತ್ರಿ ಸಿಎಂ ಬೊಮ್ಮಾಯಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಖಲಿದ್ದಾರೆ ಎನ್ನಲಾಗಿದೆ.
‘7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆ ಸರ್ಕಾರಿ ನೌಕರರ ಜೊತೆ ಮಾತುಕತೆ ನಡೆಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿ.ಎಸ್ ವಂದಿತಾ ಶರ್ಮಾ ಸಭೆ ಕರೆದಿದ್ದರು.ಸಭೆ ಬಳಿಕ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇವೆ, ಅವರು ಸಂಜೆವರೆಗೂ ಕಾಲಾವಕಾಶ ಕೇಳಿದ್ದಾರೆ ಎಂದರು.
ಹೀಗಾಗಿ ಸರ್ಕಾರಿ ನೌಕರರ ಮನವೊಲಿಸಲು ಸಿಎಂ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದು, ಇದೀಗ ರಾತ್ರಿ 9:30 ಕ್ಕೆ ಸಂಘದ ಪದಾಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ನಾಳೆ ಬಹುತೇಕ ಸೇವೆಯಲ್ಲಿ ವ್ಯತ್ಯಯವಾಗಲಿದೆ