ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ 650 ಹುದ್ದೆಗಳಿಗೆ ನೇರ ನೇಮಕಾತಿ ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ನಿಗಧಿ ಪಡಿಸಲಾಗಿದ್ದಂತ ಅರ್ಜಿ ಶುಲ್ಕವನ್ನು ಇಳಿಕೆ ಮಾಡಿ, ಕೆಇಎ ಅರ್ಜಿ ಸಲ್ಲಿಕೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್ ನೀಡಿದೆ.
ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ , ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಎಂದಿದ್ದಾರೆ.
ಈ ಮೇಲ್ಕಂಡ ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಪರಿಷ್ಕರಿಸಲಾಗಿರುತ್ತದೆ. ಸಾಮಾನ್ಯ ವರ್ಗದವರಿಗೆ ರೂ.500, ಹಿಂದುಳಿದ ವರ್ಗಗಳು 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.300, ಎಸ್.ಸಿ., ಎಸ್.ಟಿ., ಪ್ರವರ್ಗ-1 ರೂ.200 ಹಾಗೂ ವಿಕಲಚೇತನರು / ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶುಲ್ಕ ಪಾವತಿಸುವುದಕ್ಕೆ ದಿನಾಂಕ 30-06-2023ರ ಮಧ್ಯಾಹ್ನ 1 ರಿಂದ ಚಲನ ಡೌನ್ ಲೋಡ್ ಮಾಡಿಕೊಂಡು ಪಾವತಿಸಬಹುದಾಗಿದೆ ಎಂದು ತಿಳಿಸಿದೆ.