Share this news

ನವದೆಹಲಿ: ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೊಡಲು 3 ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ಇದಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೆ, ಇದು ಸರ್ಕಾರಕ್ಕೆ ಬಿಟ್ಟ ವಿಚಾರ ಎಂದೂ ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.ಬಹುಮತದ ತೀರ್ಪಿನಲ್ಲಿ, ನ್ಯಾಯಾಲಯವು ಸಲಿಂಗ ವಿವಾಹದ ವಿರುದ್ಧ ತೀರ್ಪು ನೀಡಿದೆ.

ಮದುವೆ ಮೂಲಭೂತ ಹಕ್ಕು ಅಲ್ಲ ಎಂದು ಎಲ್ಲಾ ಐದು ನ್ಯಾಯಮೂರ್ತಿಗಳು ಒಪ್ಪಿಕೊಂಡಿದ್ದಾರೆ. ಶಾಸಕಾಂಗವು ಸಲಿಂಗ ವಿವಾಹವನ್ನು ತರಲು ನಿರ್ಧರಿಸಬೇಕು ಎಂಬುದು ಸಹ ಬಹುಮತದ ಅಭಿಪ್ರಾಯವಾಗಿದೆ. ನ್ಯಾಯಮೂರ್ತಿಗಳಾದ ಭಟ್, ಹಿಮಾ ಕೊಹ್ಲಿ ಮತ್ತು ನರಸಿಂಹ ಅವರು ಬಹುಮತದ ಅಭಿಪ್ರಾಯವನ್ನು ಮಂಡಿಸಿದರೆ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಕೌಲ್ ಅಲ್ಪಸಂಖ್ಯಾತರ ಅಭಿಪ್ರಾಯವನ್ನು ಮಂಡಿಸಿದರು.ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸಬೇಕೇ ಎಂಬ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್ಗಳ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಹಾಕಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ರಚನೆ ಮಾಡಿತ್ತು.
ಮದುವೆಯು ಹಲವಾರು ಹಕ್ಕುಗಳು, ಸವಲತ್ತುಗಳು ಮತ್ತು ಕಟ್ಟುಪಾಡುಗಳನ್ನು “ಕಾನೂನಿಂದ ಪಾಲಿಸಲಾಗಿದೆ ಮತ್ತು ರಕ್ಷಿಸುತ್ತದೆ” ಎಂದು ಅರ್ಜಿಗಳು ವಾದಿಸಿದ್ದವು. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಆಯೋಗವು (ಆಅPಅಖ) ಈ ರೀತಿಯ ಮದುವೆಗಳನ್ನು ಗುರುತಿಸುವಂತೆ ತಿಳಿಸಿದೆ. ಮಕ್ಕಳ ಮೇಲೆ ಇಂತಹ ವಿವಾಹಗಳ ಪ್ರಭಾವದ ಕುರಿತು ನ್ಯಾಯಾಲಯಕ್ಕೆ ಸಹಾಯ ಮಾಡಲು ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.

 

 

 

 

 

 

 

 

 

Leave a Reply

Your email address will not be published. Required fields are marked *