ಕಾರ್ಕಳ :ಕಾರ್ಕಳ ತಾಲೂಕಿನ ಸಾಣೂರು ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆ ಇಲ್ಲದೇ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂ ನಗದು ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಮೂಡಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೊಲೆರೋ ವಾಹನವನ್ನು ಸಾಣೂರು ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿ ಮತ್ತು ಪೊಲೀಸರು ತಡೆದಾಗ ವಾಹನದಲ್ಲಿ 50 ಲಕ್ಷ ರೂ. ಹಣ ಪತ್ತೆಯಾಗಿದೆ. ಸೂಕ್ತ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನಲೆ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಸಂದರ್ಭ ಚುನಾವಣಾಧಿಕಾರಿ ಮದನ್ ಮೋಹನ್,ಡಿವೈಎಸ್ಪಿ ಅರವಿಂದ ಕಲಗುಜ್ಜಿ, ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್, ಎಸ್ಐ ಕಲೈಮಾರ್ ಹಾಗೂ ಪ್ರಸನ್ನ ಎಂ.ಎಸ್ ಇದ್ದರು.