Share this news

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂಬ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಎನ್ ಡಿ ಟಿವಿ ಪ್ರಕಟಿಸಿದ ಸುದ್ದಿ ಲೇಖನ ಕರ್ನಾಟಕದ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ನಾನು ಹೇಳಿಕೆ ನೀಡಿದ್ದೇನೆ ಎಂಬ ಅದಾನಿ ಟಿವಿ ಆರೋಪ ಸತ್ಯಕ್ಕೆ ದೂರವಾದುದು.ನಾನು ಎಂದಿಗೂ ಅಂತಹ ಹೇಳಿಕೆಗಳನ್ನು ನೀಡಿಲ್ಲ ಮತ್ತು ಅಂತಹ ಕ್ಷುಲ್ಲಕ ರಾಜಕೀಯವನ್ನು ಎಂದಿಗೂ ಮಾಡುವುದಿಲ್ಲ. ಎನ್ ಡಿ ಟಿವಿಗೆ ನಾನು ಒತ್ತಾಯಿಸುತ್ತೇನೆ ಆಧಾರರಹಿತ ಪೋಸ್ಟ್ ಅನ್ನು ತೆಗೆದುಹಾಕಿ ಸ್ಪಷ್ಟಿಕರಣ ನೀಡುವಂತೆ ಒತ್ತಾಯಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು.ಇದು ನನ್ನ ಸಾರ್ವಜನಿಕ ಜೀವನದ ಕೊನೇ ಚುನಾವಣೆ. ಹೀಗಾಗಿ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿಯಾಗಲು ಹೈಕಮಾಂಡ್ ಅವಕಾಶ ನೀಡುವುದಿಲ್ಲ ಎಂದು ಸಂದರ್ಶನದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿತ್ತು.

Leave a Reply

Your email address will not be published. Required fields are marked *