ಹುಬ್ಬಳ್ಳಿ:ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿರುವ ಪ್ರಕರಣವು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಬಿಜೆಪಿ ಮುಖಂಡರು ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹೋರಾಟ ನಡೆಸುತ್ತಿದ್ದು,ಈ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರು ಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್,ಮಹೇಶ್ ಟೆಂಗಿನಕಾಯಿ,ಅರವಿಂದ ಬೆಲ್ಲದ್ ಸೇರಿದಂತೆ 42 ಬಿಜೆಪಿ ಮುಖಂಡರ ವಿರುದ್ದ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ