ಧರ್ಮಸ್ಥಳ(ದಕ್ಷಿಣ ಕನ್ನಡ):ವಿಧಾನಭಾ ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ಅಧಿಕಾರಿಗಳು ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದರೆ, ಇತ್ತ ಮಾದರಿ ಚುನಾವಣಾ ನೀತಿ ಸಂಹಿತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಬಿಟ್ಟಿಲ್ಲ.

ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಅವರನ್ನು ತಡೆದಿದ್ದಾರೆ.

ಚುನಾವಣಾಧಿಕಾರಿ ಕುಸುಮಾಧರ್ ಅವರು ಎಸ್ಪಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕ್ಯಾಪ್ಟರ್, ಅವರ ಬಳಿಯಲ್ಲಿದ್ದಂತ ಸೂಟ್ ಕೇಸ್ ಅನ್ನು ಪರಿಶೀಲನೆ ನಡೆಸಿದರು. ಈ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ತೆರಳಲು ಅವಕಾಶ ಮಾಡಿಕೊಟ್ಟರು.

