ಬೆಂಗಳೂರು:ಮುಂದಿನ 5 ವರ್ಷಗಳ ಅವಧಿಗೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಈ ಮೂಲಕ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದು, ಅವರು ಸಿಎಂ ಆಗುವುದಕ್ಕೆ ತನ್ನ ವಿರೋಧವಿದೆ ಎನ್ನುವ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ
ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಎಂಬಿ ಪಾಟೀಲ್,ಸಿಎಂ ಸಿದ್ದರಾಮಯ್ಯ ಓರ್ವ ಸಮರ್ಥ ಆಡಳಿತಗಾರ,ಯಾವುದೇ ಆರೋಪಗಳಿಲ್ಲದ ಅವರನ್ನೇ 5 ವರ್ಷ ಪೂರ್ಣಾವದಿಗೆ ಸಿಎಂ ಆಗಿ ಹೈಕಮಾಂಡ್ ಮುಂದುವರಿಸಲಿದೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಯಾವ ಬದಲಾವಣೆಯೂ ಇಲ್ಲ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ನಡೆದಿಲ್ಲವೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿಕೆ ನೀಡಿದ್ದು, ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಸೇರಿ ಎಲ್ಲಾ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.