Share this news

ಕೊಪ್ಪಳ : ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 18 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಸುನೀಲ್ ಕುಮಾರ್, ನಮ್ಮ ಅವಧಿಯಲ್ಲಿ ಕೇವಲ ಒಬ್ಬ ಹಿಂದೂವಿನ ಕೊಲೆಯಾಗಿದೆ.ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದ್ದು, ಟಿಪ್ಪು ಜಯಂತಿ, ಶಾಧಿ ಭಾಗ್ಯ ಮುಂತಾದ ಯೋಜನೆಗಳಿಂದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡಿ ಜನರಿಂದ ತಿರಸ್ಕಾರಗೊಂಡಿದೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *