Share this news

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದಾಗಿ ಸತ್ಯ ಒಪ್ಪಿಕೊಂಡಿದ್ದಾಳೆ ಎನ್ನುವ ಸ್ಫೋಟಕ ಮಾಹಿತಿ ಲಭಿಸಿದೆ.

ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈAದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್‌ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.

ಚೈತ್ರಾ ಕುಂದಾಪುರ ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಎನ್ನುವರಿಗೆ 5 ಕೋಟಿ ರೂ. ವಂಚನೆ ಮಾಡಿರುವ ಆರೋಪದಲ್ಲಿ ಅರೆಸ್ಟ್ ಆಗಿದ್ದರು. ಇದೀಗ ಸಿಸಿಬಿ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಸ್ವಾಮೀಜಿ ಅರೆಸ್ಟ್ ಆದರೆ ದೊಡ್ಡವರ ಹೆಸರು ಹೊರಗೆ ಬರುತ್ತೆ ಎಂದಿದ್ದಾರೆ ಚೈತ್ರಾ. ಅಷ್ಟಕ್ಕೂ 2017 ರಿಂದ ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಸುತ್ತಿರುವ ಗೋವಿಂದ್‌ಬಾಬುಗೆ ಸರ್ಕಾರದಿಂದ 35 ಕೋಟಿ ಹಣ ಬರಬೇಕಿದೆ. ಆ ಹಣಕ್ಕಾಗಿಯೇ ಈ ರೀತಿ ಆರೋಪ ಮಾಡಿದ್ದಾರೆ ಎನ್ನುವುದು ಚೈತ್ರಾ ಆರೋಪ. ಆದರೆ ಇದನ್ನು ತಳ್ಳಿಹಾಕಿರುವ ಗೋವಿಂದ್ ಬಾಬು, ಇದರಲ್ಲಿ ಯಾರ ಪಾತ್ರವೂ ಇಲ್ಲ. ಯಾವ ಷಡ್ಯಂತ್ರವೂ ಇಲ್ಲ. ಈಕೆಯೇ ಹಣ ನುಂಗಿದ್ದಾಳೆ. ಇಂದಿರಾ ಕ್ಯಾಂಟೀನ್‌ಗೂ ಇದಕ್ಕೂ ಸಂಬAಧ ಇಲ್ಲ ಎಂದಿದ್ದಾರೆ.

ಈವರೆಗೂ 8 ಆರೋಪಿಗಳು ಲಾಕ್ ಆಗಿದ್ದು ಎಲ್ಲರ ಮೊಬೈಲ್ ವಶಕ್ಕೆ ಪಡೆದಿರುವ ಸಿಸಿಬಿ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ಕಳಿಸಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಹಾಲಶ್ರೀ ಸ್ವಾಮೀಜಿ ಬಂಧನ ಬಳಿಕ ಮತ್ತಷ್ಟು ತಿರುವು ಪಡೆಯಲಿದೆ.

 

 

Leave a Reply

Your email address will not be published. Required fields are marked *