ಸುಳ್ಯ: ಸುಳ್ಯ ಬಳಿಯ ಸಂಪಾಜೆಯಲ್ಲಿ ಕಾರು ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.
ಸುಳ್ಯದ ಸಂಪಾಜೆ ಪೇಟೆಯಲ್ಲಿ ಕಾರು ಮತ್ತು ಸರಕಾರಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು, ಈ ಕಾರಿನಲ್ಲಿದ್ದ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಮಡಿಕೇರಿ ಮೂಲದವರಾಗಿದ್ದು ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸಪಟ್ಟರು.
ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮೃತ ಕುಟುಂಬಸ್ಥರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.