Share this news

ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ಆಯತಪ್ಪಿ ನೀರಿಗೆ ಬಿದ್ದು ಪ್ರವಾಹದಲ್ಲಿ ಕೊಚ್ಚಿ ಹೋದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ನಾರಾಯಣ(45) ಎಂಬವರು ನೀರುಪಾಲಾದ ವ್ಯಕ್ತಿ.ಅವರು ಗುರುವಾರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಿರುಸೇತುವೆ ದಾಟುವಾಗ ಚರಂಡಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾಗಿದ್ದಾರೆ.
ವ್ಯಕ್ತಿ ನೀರು ಪಾಲಾಗುತ್ತಿದ್ದ ವಿಷಯವನ್ನು ಸ್ಥಳೀಯರು ರಕ್ಷಣಾ ತಂಡಗಳಿಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಲು ಮುಂದಾದರೂ ಭಾರೀ ಪ್ರವಾಹದಿಂದ ರಕ್ಷಣಾ ಕಾರ್ಯ ವಿಫಲವಾಗಿದೆ. ಆದರೆ ನೀರುಪಾಲಾದ ವ್ಯಕ್ತಿ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆಯಿದ್ದು ಆತನ ಶೋಧಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸುವಂತೆ ತಾಲೂಕಿನ ತಹಸೀಲ್ದಾರ್ ಮನವಿ ಮಾಡಿದ್ದಾರೆ

Leave a Reply

Your email address will not be published. Required fields are marked *