Share this news

ಕಾರ್ಕಳ : ಹಿಂದೂ ಜಾಗರಣ ವೇದಿಕೆ ಅಜೆಕಾರು ವಲಯ ಇದರ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 10 ಭಾನುವಾರದಂದು ಮಧ್ಯಾಹ್ನ 2 ಗಂಟೆಯಿಂದ ಅಜೆಕಾರು ಪೇಟೆಯಲ್ಲಿ ನಡೆಯಲಿದೆ.

ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಪುರುಷರಿಗೆ, ಮಹಿಳೆಯರಿಗೆ, ಹಿರಿಯರಿಗೆ ಮತ್ತು ಕಿರಿಯರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿಂದೂ ಜಾಗರಣ ವೇದಿಕೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *