ಕಾರ್ಕಳ:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ವತಿಯಿಂದ ಕಾರ್ಕಳ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 24ರಂದು ಕಾರ್ಕಳದಲ್ಲಿ ಹೃದಯಕ್ಕಾಗಿ ನಡಿಗೆ” ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಶ್ವದಾದ್ಯಂತ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರದಂದು ಆಚರಿಸಲ್ಪಡುವ ಈ ಕಾರ್ಯಕ್ರಮದಲ್ಲಿ ನಡಿಗೆ ಕಾರ್ಯಕ್ರಮಕ್ಕೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ| ನಿರಂಜನ್ ಚಿಪ್ಲೂಣ್ಕರ್ ಚಾಲನೆ ನೀಡಲಿದ್ದು, ಬೆಳಿಗ್ಗೆ 7.00 ಘಂಟೆಗೆ ಕಾರ್ಕಳ ಅನಂತಶಯನ ವೃತ್ತದಿಂದ ನಿಟ್ಟೆ ಕಾರ್ಕಳ ಮುಖ್ಯರಸ್ತೆಯ ಮೂಲಕ ಸಾಗಿ ಟಿ.ಎಂ.ಎ ಪೈ ಆಸ್ಪತ್ರೆಯ ಬಳಿ ಸಮಾಪನಗೊಳ್ಳಲಿದೆ.
ಬಳಿಕ ಆಸ್ಪತ್ರೆಯ ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ “ಜೀವನ ಶೈಲಿ ಕಾಯಿಲೆಗಳು” ಎನ್ನುವ ವಿಷಯದಲ್ಲಿ ಬೀದಿ ನಾಟಕ ಸ್ಪರ್ಧೆ ಆಯೋಜಿಸಲಾಗಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ತಜ್ಞ ವೈದ್ಯರು ಹೃದಯದ ಆರೋಗ್ಯದ ಬಗ್ಗೆ ಅರಿವನ್ನು ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾರ್ಕಳ ಆಸುಪಾಸಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕೆಂದು ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

























