ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಸೌಜನ್ಯ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬಿಜೆಪಿ ಶಾಸಕರ ಮನವಿ ಸ್ವೀಕರಿಸಿದ ಸಿಎಂ, ಈ ಪ್ರಕರಣವನ್ನು ಮರು ತನಿಖೆ ನಡೆಸಲು ಸರ್ಕಾರಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಈ ಕುರಿತು ಈಗಾಗಲೇ ಸೌಜನ್ಯ ಪೋಷಕರಿಗೆ ವಿಚಾರವನ್ನು ತಿಳಿಸಲಾಗಿದೆ. ಆದರೆ ಈ ತೀರ್ಪಿನ ವಿರುದ್ಧ ಸೌಜನ್ಯಾಳ ಪೋಷಕರು ಮೇಲ್ಮನವಿ ಅಥವಾ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಅವಕಾಶವಿದೆ ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ