ಮಂಗಳೂರು: ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊAಡು ಮಹೇಶ್ ಶೆಟ್ಟಿ ತಿಮರೋಡಿ ಜೈನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾಡಿರುವ ಆರೋಪಗಳಿಗೆ ಸಂಬAಧಿಸಿದAತೆ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ತಿಮರೋಡಿಯಿಂದ ಜೈನ ಸಮುದಾಯಕ್ಕೆ ಅವಮಾನವಾಗಿದ್ದು ಆತನ ವಿರುದ್ಧ ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಈ ಕುರಿತು ಶುಕ್ರವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅಭಯಚಂದ್ರ ಜೈನ್,ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ದ ಮಾತನಾಡ್ತಿದ್ದಾನೆ. ಅವನು ಹಣ ಮಾಡುವ ಉದ್ದೇಶದಿಂದ ಹೋರಾಟ ಮಾಡುತ್ತಿದ್ದಾನೆ,ಮಹೇಶ್ ಶೆಟ್ಟಿ ಒಬ್ಬ ರೌಡಿಶೀಟರ್, ಅವನ ಈ ಹೇಳಿಕೆಗಳ ವಿರುದ್ಧ ನಾವು ಪ್ರತಿಭಟಿಸುತ್ತೇವೆ. ಅವನಿಗೆ ತಲೆ ಸರಿ ಇಲ್ಲ, ನಮ್ಮ ಹೆಗ್ಗಡೆಯವರ ಬಗ್ಗೆ ಮಾತನಾಡ್ತಾನೆ, ಅವನ ವಿರುದ್ದ ಕಾನೂನಾತ್ಮಕ ಹೋರಾಟ ನಾವು ಮಾಡ್ತೇವೆ. ಸಮಾಜದ ವ್ಯಕ್ತಿ ಹೆಗಡೆಯವರ ವಿರುದ್ದ ಅವನು ಅಪನಂಬಿಕೆ ಮೂಡಿಸ್ತಿದಾನೆ. ತಿಮರೋಡಿ ಎಷ್ಟೇ ದೊಡ್ಡ ರೌಡಿಯಾದರೂ ನಾವು ನೋಡಿಕೊಳ್ತೇವೆ. ತಿಮರೋಡಿ ನೈಜ ಆರೋಪಿಗಳ ಪತ್ತೆಗೆ ಐಜಿ ಕಚೇರಿ ಎದುರು ಹೋರಾಟ ಮಾಡಲಿ. ಯಾರೋ ದೊಡ್ಡ ವ್ಯಕ್ತಿ ವಿರುದ್ದ ಮಾತನಾಡುವುದಲ್ಲ. ಜೈನ ಸಮುದಾಯಕ್ಕೂ ಮಹೇಶ್ ಶೆಟ್ಟಿ ತಿಮರೋಡಿ ಅವಮಾನ ಮಾಡಿದ್ದಾನೆ.ಇದಕ್ಕಾಗಿ ಮಹೇಶ್ ಶೆಟ್ಟಿಯ ವಿರುದ್ಧ ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಸಿದರು,
ಸುದ್ದಿಗೋಷ್ಟಿಯಲ್ಲಿ ಧೀರಜ್ ಜೈನ್ ಮಾತನಾಡಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ನಮ್ಮ ವಿರುದ್ದ ಆರೋಪ ಮಾಡಿದ್ದರು. ದುಡ್ಡು ಮಾಡುವ ಏಕೈಕ ಉದ್ದೇಶದಿಂದ ತಿಮರೋಡಿ ಈ ಆರೋಪ ಮಾಡಿದ್ದರು. ನಾವು ತನಿಖೆಗೆ ಹಾಜರಾದರೂ ಸುಖಾಸುಮ್ಮನೆ ಆರೋಪ ಮಾಡಲಾಗಿತ್ತು.
ಈ ಪ್ರಕರಣದ ಕುರಿತಂತೆ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮತ್ತೆ ನಮ್ಮ ವಿರುದ್ದ ಆರೋಪ ಮಾಡುತ್ತಿದ್ದಾನೆ. ಮಾಧ್ಯಮಗಳ ಎದುರು ಬಂದು ನಮ್ಮ ವಿರುದ್ದ ಆರೋಪ ಮಾಡುತ್ತಿದ್ದಾನೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದೇವೆ. ತಿಮರೋಡಿ ಅವರು ಕಾನತ್ತೂರು ನಾಲ್ವರ್ ದೈವಗಳ ಎದುರು ಬಂದು ಆಣೆಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.
ಈ ಸಂದರ್ಭದಲ್ಲಿ ಮಲ್ಲಿಕ್ ಜೈನ್ ಮಾತನಾಡಿ, ಆರೋಪಿ ಸಂತೋಷನನ್ನು ನಾವು ಕಳ್ಳತನದ ಸಂಶಯದ ಮೇಲೆ ಪೊಲೀಸರಿಗೆ ಹಿಡಿದು ಕೊಟ್ಟೆವು. ಆದರೆ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದು, ಸಂತೋಷ್ ಸೌಜನ್ಯ ಕೊಲೆ ಆರೋಪಿ ಅಂತ ನಾವೇನೂ ಹೇಳಿಲ್ಲ, ಆ ಸಂದರ್ಭದಲ್ಲಿ ಸ್ಥಳೀಯರು ಸಂತೋಷ್ ಗೆ ಹೊಡೆದಿದ್ದರು. ನಾವು ಹೊಡೆದಿಲ್ಲ ಎಂದು ಮಲ್ಲಿಕ್ ಜೈನ್ ಹೇಳಿಕೆ ನೀಡಿದರು.