ಮಂಗಳೂರು: ಕಳೆದ 7 ದಿನಗಳಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್‌ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಹರಿಬಿಟ್ಟಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ “ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು” ಎಂದು ಕರೆದಿದ್ದಾನೆ.
ಪ್ಯಾಲೆಸ್ತೀನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ. ಹಮಾಸಿಗರು ದೇಶ ಪ್ರೇಮಿ ಯೋಧರು. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸಬೇಕು ಎಂದು ಝಾಕಿರ್ ಹೇಳಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಝಾಕಿರ್ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಝಾಕಿರ್‌ನನ್ನು ಕೂಡಲೇ ಬಂಧಿಸುವAತೆ ಒತ್ತಾಯಿಸಿದ್ದಾರೆ.
ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆಯಿಂದ ವೈಮಾನಿಕ ದಾಳಿ ಮಾಡಿದ್ದು, 70 ಜನ ಮೃತಪಟ್ಟಿದ್ದಾರೆ. ಇಸ್ರೇಲ್ 24 ಗಂಟೆಯಲ್ಲಿ ಗಾಜಾಪಟ್ಟಿ ತೊರೆಯಲು ಜನರಿಗೆ ಗಡುವು ನೀಡಿತ್ತು. ಗಡುವು ಮುಕ್ತಾಯ ಹಿನ್ನೆಲೆ ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಇದರಿಂದ ಗಾಜಾಪಟ್ಟಿ ತೊರೆಯುತ್ತಿದ್ದ 70 ಜನ ಸಾವೀಗಿಡಾಗಿದ್ದಾರೆ.