Share this news

ಚಿತ್ರದುರ್ಗ:ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ,ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯರು ‌ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವೊಂದಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಿದ ನೌಕರರು, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಹಾಗೂ ನಿಗಮ ಮಂಡಳಿ ಅನುದಾನಿತ ನೌಕರರಿಗೆ 1.4.2006 ರಿಂದ ಜಾರಿಯಲ್ಲಿರುವ ಅವೈಜ್ಞಾನಿಕವಾದ ಎನ್‌ಪಿಎಸ್ ಯೋಜನೆಯನ್ನು ಸರಕಾರ ರದ್ದು ಮಾಡಿ, ನಿಶ್ಚಿತ ಯೋಜನೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಹಾಗೂ ನಿಗಮ ಮಂಡಳಿ ,ಅನುದಾನಿತ ನೌಕರರಿಗೆ ಮಾರಕವಾಗಿರುವ ಎನ್ ಪಿಎಸ್ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಮೂಲಕ ನೌಕರರ ಹಾಗೂ ಕುಟುಂಬದ ಹಿತಕಾಪಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ
ಡಾ.ಸ.ರಾ.ಲೇಪಾಕ್ಷ ಮನವಿಯಲ್ಲಿ ಒತ್ತಾಯಿಸಿದ್ದಾರೆ

 

 

 

 

 

 

 

 

Leave a Reply

Your email address will not be published. Required fields are marked *