Share this news

ಹಾಸನ:ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಹೆಚ್​ಡಿ ರೇವಣ್ಣ ಅವರ ಆಪ್ತ ಹಾಗೂ ಗುತ್ತಿಗೆದಾರ ಅಶ್ವಥ್ ಗೌಡ ಎಂಬವರ ಮೇಲೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ಸೂರನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗುತ್ತಿಗೆದಾರರ ಅಶ್ವಥ್ ಗೌಡ ರೇವಣ್ಣ ಅವರನ್ನು ಭೇಟಿಯಾಗಿ ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಂಗಳವಾರ ಸಂಜೆ ಹಾಸನದಿಂದ ಎಚ್.ಡಿ.ರೇವಣ್ಣ ಅವರ ಜತೆಗೆ ಹೊಳೆನರಸೀಪುರದ ಮನೆಗೆ ತೆರಳಿದ್ದ ಅಶ್ವಥ್ ಗೌಡ, ಸ್ವಲ್ಪ ಹೊತ್ತು ಅವರ ಮನೆಯಲ್ಲಿದ್ದು,ಬಳಿಕ ವಾಪಾಸು ಕಾರಿನಲ್ಲಿ ತೆರಳುತ್ತಿದ್ದಾಗ ಐದಾರು ಜನ ದುಷ್ಕರ್ಮಿಗಳ ತಂಡ, ಸೂರನಹಳ್ಳಿ ಗ್ರಾಮದ ಹಂಪ್ಸ್ ಬಳಿ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿಹಾಕಿದ್ದಾರೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೇ ಅಶ್ವಥ್ ರವರು ಕಾರನ್ನು ಬಹಳ ವೇಗವಾಗಿ ಓಡಿಸಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದಾರೆ.ಆದರೂ ದುಷ್ಕರ್ಮಿಗಳು ಬೆನ್ನುಬಿಡದೆ ಸ್ವಲ್ಪ ದೂರದವರೆಗೂ ಅವರನ್ನು ಹಿಂಬಾಲಿಸಿದ್ದಾರೆ.ಘಟನೆ ಸಂಬಂಧ ಅಶ್ವಥ್ ಅವರು ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತನ್ನ ಆಪ್ತನ ಮೇಲೆ ದಾಳಿ ನಡೆಸಿದ ಬಗ್ಗೆ ಮಾಹಿತಿ ತಿಳಿದ ರೇವಣ್ಣ ಅವರು ಅಶ್ವಥ್ ಅವರನ್ನ ಭೇಟಿಯಾಗಿ ವಿಚಾರಿಸಿದ್ದಾರೆ.

ಪೊಲೀಸರು ಘಟನೆಯ ಕುರಿತು ಆರೋಪಿಗಳ ಬೆನ್ನುಬಿದ್ದಿದ್ದು ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಆಧರಿಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ದಾಳಿಗೆ ನಿಖರ ಕಾರಣವೇನೆಂದು ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *