ಬೆಂಗಳೂರು : ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿ ಬಂಧನಕ್ಕೊಳಗಾದ ನಟ ಚೇತನ್ ಗೆ ಬೆಂಗಳೂರಿನ 32 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. 25 ಸಾವಿರ ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ನೀಡಲು ಕೋರ್ಟ್ ಸೂಚನೆ ನೀಡಿದೆ.
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ, ಐಪಿಸಿ ಸೆಕ್ಷನ್ 295A ಹಾಗೂ 505 Bರಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ನಟ ಚೇತನ ಹೊಸ ವಿವಾದವನ್ನು ಸೃಷ್ಟಿಸಿದ್ದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಿಂದುತ್ವದನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನು ಸೋಲಿಸಿ ಅಯೋದ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭುಮಿ ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇ ಗೌಡರು ಟಿಪ್ಪುವನ್ನು ಕೊಂದರು ಇದು ಕೂಡ ಒಂದು ಸುಳ್ಳು ಹಿಂದುತ್ವವನ್ನು ಸತ್ಯದೊಂದ ಸೋಲಿಸಬಹುದು ಸತ್ಯವೇ ಸಮಾನತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.