Share this news

ಬೆಂಗಳೂರು:ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಅವಧಿಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನೇ ಮರು ನೇಮಕ ಮಾಡಲಾಗಿದೆ. 2024ರ
ಜನವರಿ 31ರವರೆಗೆ ಮರು ನೇಮಕಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ವಿಸ್ತರಣೆಗೆ ಅವಕಾಶ ಇಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಮರುನೇಮಕ ಮಾಡಲಾಗಿದೆ ಎನ್ನಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಚರ್ಚೆ ತಾರಕಕ್ಕೇರಿರುವ ಹೊತ್ತಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆಯೋಗದ ಅಧ್ಯಕ್ಷರು, ಸದಸ್ಯರ ಅವಧಿಯನ್ನು ವಿಸ್ತರಣೆ ಮಾಡಲಾಗದ ಕಾರಣ ಮರು ನೇಮಕ ಮಾಡಲಾಗಿದೆ. ಹೀಗಾಗಿ ಸದ್ಯಕ್ಕೆ ಸಮೀಕ್ಷಾ ವರದಿ ಸರ್ಕಾರದ ಕೈ ಸೇರುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ.
ಜಾತಿ ಗಣತಿ ವರದಿ ಕುರಿತು ಸರ್ಕಾರದಲ್ಲೇ ಪರವಿರೋಧ ಚರ್ಚೆಗಳು ಹುಟ್ಟಿಕೊಂಡಿದ್ದು ಅಂತಿಮವಾಗಿ ವರದಿ ಸರ್ಕಾರದ ಕೈ ಸೇರುತ್ತದೆಯೇ ಎನ್ನುವುದೇ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *