ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಮ ಮಂದಿರ ಹೋರಾಟದಲ್ಲಿ ಕರಸೇವಕರಾಗಿದ್ದ ಶ್ರೀಕಾಂತ್ ಪೂಜಾರಿಯವರನ್ನು 30 ವರ್ಷಗಳ ಬಳಿಕ ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದೆ
ಈ ವಿಚಾರದ ಕುರಿತಂತೆ ಬೆಂಗಳೂರಿನಲ್ಲಿ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಗುರುವಾರ ಏಕಾಎಕಿ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಾನೂ ಕೂಡ ಕರಸೇವಕ ನನ್ನನ್ನೂ ಬಂಧಿಸಿ ಎಂದು ಧರಣಿ ನಡೆಸಿದರು. ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸುನಿಲ್ ಕುಮಾರ್ ,ರಾಮ ಮಂದಿರದ ವಿರುದ್ಧವಾಗಿ ನಿರಂತರವಾಗಿ ಹೇಳಿಕೆ ನೀಡಿ ಇದರ ಭಾಗವಾಗಿ ಕರಸೇವಕರನ್ನು ಬಂಧಿಸಿ ಜೈಲಿಗಟ್ಟುತ್ತಿದೆ,ಇದಕ್ಕೆ ಕಾಂಗ್ರೆಸ್ ಸರಿಯಾದ ಬೆಲೆ ತೆರಲಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಪೊಲೀಸರು ಸುನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡರು
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ