Share this news

ಬೆಂಗಳೂರು: ಹಿಜಾಬ್ ನಿಷೇಧ ಆದೇಶವನ್ನು ನಮ್ಮ ಸರ್ಕಾರ ವಾಪಾಸ್ ಪಡೆಯಲಿದೆ ಎನ್ನುವ ಮೂಲಕ ಕಿಚ್ಚು ಹೊತ್ತಿಸಿದ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ನಮ್ಮಲ್ಲಿ ಚರ್ಚೆಯೇ ಆಗಿಲ್ಲ, ಆದರೆ ಪತ್ರಕರ್ತರು ಇದೇ ವಿಚಾರವನ್ನು ಕೆದಕಿ ದೊಡ್ಡದು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಜಾಬ್ ವಿಚಾರವಾಗಿ ಸರ್ಕಾರ ಅನಗತ್ಯ ಗೊಂದಲಕ್ಕೆ ಅವಕಾಶ ನೀಡುವುದಿಲ್ಲ, ಸಧ್ಯಕ್ಕೆ ಈ ವಿಚಾರ ಅಪ್ರಸ್ತುತ ಎಂದು ಡಿಕೆಶಿ ಜಾಣ ಉತ್ತರ ನೀಡಿದರು.
ಆದರೆ ಸಿಎಂ ಸಿದ್ದರಾಮಯ್ಯ ಮಾತ್ರ ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಎಂದು ವಿಪಕ್ಷಗಳು ಗಂಭೀರ ಆರೋಪ ಮಾಡುತ್ತಿದ್ದು, ಈ ವಿವಾದ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಲಿದೆಯೇ ಎನ್ನುವುದು ಸಧ್ಯದ ಪ್ರಶ್ನೆಯಾಗಿದೆ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *