ಮೈಸೂರು: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಇನ್ನೂ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವುದು ಮಾಡಿಲ್ಲ. ಯಾರೋ ನನಗೆ ಹಿಜಾಬ್ ನಿಷೇಧ ತೆಗೆದುಹಾಕುವ ಬಗ್ಗೆ ಪ್ರಶ್ನೆಯನ್ನು ಕೇಳಿದರು. ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ನಾನು ಉತ್ತರಿಸಿದೆ. ಈ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.
ಉಡುಪು ಪ್ರತಿಯೊಬ್ಬರ ವೈಯಕ್ತಿಕ ಆಯ್ಕೆಯ ವಿಷಯವಾಗಿದ್ದು, ರಾಜ್ಯದಲ್ಲಿ ಹಿಜಾಬ್ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದರು ಆದರೆ ಇಂದು ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ
ಪ್ರಧಾನಿ ಮೋದಿಯವರ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಬೋಗಸ್ ಆಗಿದೆ. ಬಿಜೆಪಿಯು ಜನರು ಮತ್ತು ಸಮಾಜವನ್ನು ಬಟ್ಟೆ, ಉಡುಗೆ ಮತ್ತು ಜಾತಿಯ ಆಧಾರದ ಮೇಲೆ ವಿಭಜಿಸುತ್ತಿದೆ’ ಎಂದು ಸಿಎಂ ದೂರಿದ್ದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ