ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಕಾರ್ಕಳ ತಾಲೂಕು ಸಾಣುರು ವಲಯ ಹಿರಿಯಂಗಡಿ ಕಾರ್ಯಕ್ಷೇತ್ರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಡಾಕ್ಟರ್ ಅನುಪ್ ರಕ್ತದೊತ್ತಡ ಮತ್ತು ಮಧುಮೇಹದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿ ತಪಾಸಣೆ ಮಾಡಿದರು .
ಒಕ್ಕೂಟದ ಅಧ್ಯಕ್ಷ ಮಂಜುನಾಥ ಪಾಟೀಲ್, ಸೇವಾ ಪ್ರತಿನಿಧಿ ಶೋಭಾ ರಾವ್, ಆಶಾ ಕಾರ್ಯಕರ್ತೆ ಜ್ಯೋತಿ, ಆರೋಗ್ಯ ಇಲಾಖೆಯ ಹರಿಣಿ, ಶ್ವೇತಾ, ಕಿರಣ್ ಬಾಬು, ಒಕ್ಕೂಟದ ಪದಾಧಿಕಾರಿಗಳು ಸರ್ವ ಸದಸ್ಯರು ಭಾಗವಹಿಸಿದ್ದರು.
ಸುಮಾರು 60 ಮಂದಿ ಸದಸ್ಯರು ಇದರ ಸದುಪಯೋಗವನ್ನು ಪಡೆದುಕೊಂಡರು.