ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ 1991ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು,ಅವರ ಸೇವಾವಧಿ ಈ ವರ್ಷದ ಮೇ ತಿಂಗಳಾAತ್ಯಕ್ಕೆ ಕೊನೆಗೊಳ್ಳಲಿದೆ, ಆದರೆ ಮೂರು ತಿಂಗಳ ಅವಧಿಗೂ ಮುನ್ನವೇ ಅವರು ರಾಜೀನಾಮೆ ನೀಡಲು ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರತಾಪ್ ರೆಡ್ಡಿಯವರು ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು.




ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ





